ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ಸರ್ಜಿ ಆಸ್ಪತ್ರೆಗಳ ಸಮೂಹದ ಸಹಯೋಗದೊಂದಿಗೆ ಇಲ್ಲಿನ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಡಿಸೆಂಬರ್ ೨೦ ರಂದು ಬೆಳಗ್ಗೆ ೧೧ ಗಂಟೆಗೆ ಅಮೃತ ಬಿಂದು ಹೆಸರಿನಲ್ಲಿ ತಾಯಂದಿರ ಎದೆಹಾಲಿನ ಬ್ಯಾಂಕ್‌ನ್ನು ಕೋಡಿಮಠದ ಡಾ. ಶಿವಾನಂದ ರಾಜೇಂದ್ರ ಸ್ವಾಮೀಜಿ ಅವರು ಉದ್ಘಾಟಿಸಲಿದ್ದಾರೆ. ಈ ಕುರಿತು ಸರ್ಜಿ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಧನಂಜಯ್ ಸರ್ಜಿಯವರು ಮಾಹಿತಿ ನೀಡಿದರು. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತಾಡಿದ ಅವರು,
ಹುಟ್ಟಿದ ನಂತರ ಮಗುವಿಗೆ ತಾಯಿ ಕೊಡಬಹುದಾದ ಬಹುದೊಡ್ಡ ಉಡುಗೊರೆಯೆಂದರೆ ಎದೆಹಾಲು ಉಣಿಸುವುದು. ಭಗವಂತನ ಸೃಷ್ಟಿಯ ಪ್ರಪಂಚದಲ್ಲಿ ಹುಟ್ಟಿದ ಮಗುವಿಗೆ ಸಂಪೂರ್ಣ ಪೌಷ್ಟಿಕ ಆಹಾರ ಮತ್ತು ರೋಗ ನಿರೋಧಕ ಶಕ್ತಿ ನೀಡುವ ಆಹಾರವೇ ಎದೆಹಾಲು. ಇದನ್ನು ಅರಿತೇ ನಮ್ಮ ಪೂರ್ವಜರು ಎದೆಹಾಲು ಅಮೃತಕ್ಕೆ ಸಮಾನ ಎಂದು ಹೇಳಿರಬಹುದು. ಇಂತಹ ಎದೆಹಾಲನ್ನು ಶಿಶುವಿಗೆ ಉಣಿಸುವುದು ಎಲ್ಲರ ತಾಯಂದಿರ ಕರ್ತವ್ಯ, ಮಕ್ಕಳ ಹಕ್ಕು ಕೂಡ. ಒಂದು ಮಗುವಿನ ಬೆಳವಣಿಯಲ್ಲಿ ಅತಿ ಮುಖ್ಯವಾಗಿರುವ ಈ ಪ್ರಕ್ರಿಯೆಯ ಪ್ರಾಮುಖ್ಯತೆ ಇತ್ತೀಚಿನ ದಿನಗಳಲ್ಲಿ ಕ್ಷೀಣಿಸುತ್ತಿದೆ. ನವಜಾತ ಶಿಶುಗಳಿಗೂ ತಾಯಂದಿರ ಎದೆಹಾಲು ದೊರೆಯಬೇಕೆಂಬ ಸದುದ್ದೇಶದೊಂದಿಗೆ ಎದೆಹಾಲಿನ ಬ್ಯಾಂಕ್‌ನ್ನು ಪ್ರಪಂಚಾದ್ಯಂತ ಸ್ಥಾಪನೆ ಮಾಡಲಾಗಿದೆ. ಇದರ ನೇರ ಪ್ರಯೋಜನ ಅಗತ್ಯ ಪ್ರಮಾಣದಲ್ಲಿ ಎದೆಹಾಲು ಉತ್ಪತ್ತಿ ಮಾಡಲಾಗದ ತಾಯಿ ಹಾಗೂ ಎದೆಹಾಲು ವಂಚಿತವಾದ ಶಿಶುಗಳಿಗಾಗಿ ದಾನ ಮಾಡಿದ ಎದೆಹಾಲನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ, ಅಗತ್ಯ ಇರುವ ನವಜಾತ ಶಿಶುಗಳಿಗೆ ಪೂರೈಸುವ ಸಲುವಾಗಿ ಮಿಲ್ಕ್ ಬ್ಯಾಂಕ್‌ನ್ನು ಸ್ಥಾಪಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. ಖ್ಯಾತ ವೈದ್ಯರಾದ ಡಾ.ಪಿ.ನಾರಾಯಣ್, ಅಸಿಸ್ಟೆಂಟ್ ಗವರ್ನರ್ ರವಿ ಕೋಟೋಜಿ , ರೋಟರಿ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷರಾದ ಎಚ್.ಪಿ.ಶಿವರಾಜ್, ರೊ.ಜೆ.ಪಿ.ಚಂದ್ರು, ರೊ. ಕಿರಣ್ ಕುಮಾರ್, ರೋ.ಬಸವರಾಜ್, ಜೋನಲ್ ಲೆಫ್‌ಟ ನೆಂಟ್ ರೋ.ಧರ್ಮೇಂದ್ರ ಸಿಂಗ್, ಸರ್ಜಿ ಆಸ್ಪತ್ರೆ ಮೆಡಿಕಲ್ ಸೂಪರಿಂಟ್ಂಡೆಂಟ್ ಡಾ.ಪ್ರಶಾಂತ್ ಎಸ್.ವಿ. ಉಪಸ್ಥಿತರಿದ್ದರು.
Published Date
14-01-2025
Shiavamogga: ಮಲೆನಾಡಿನ ಜನತೆಗೊಂದು ಸಿಹಿಸುದ್ದಿ ಡಿ. 20 ರಂದು ತಾಯಂದಿರ ಎದೆಹಾಲು bank ಉದ್ಘಾಟನೆ|